ನಾಡು, ನುಡಿ, ದೇಶಕ್ಕೆ ಸೇವೆ ಸಲ್ಲಿಸಿದ ಮಹನೀಯರ ಪ್ರತಿಮೆಗಳನ್ನು ಸ್ಥಾಪಿಸಿ ಗೌರವಿಸುವುದು ಸಂಪ್ರದಾಯ. ಆದರೆ ಅವುಗಳ ರೂಪುರೇಷೆ, ನಿರ್ವಹಣೆಯ ಅರಿವಿಲ್ಲದೆ ಕ್ಷಣಕಾಲದ ಉತ್ತೇಜನೆಗೆ ಒಳಗಾಗಿ ಸ್ಥಾಪಿಸುವ ಪ್ರತಿಮೆಗಳು ಸಾರ್ವಜನಿಕರಿಗೆ ಕಿರಿಕಿರಿ, ಸಂಚಾರ ದಟ್ಟಣೆ ಜತೆಗೆ ಮಹನೀಯರಿಗೂ ಅವಮಾನವಾಗುವಂತೆ ಕಸಕಡ್ಡಿಗಳ ನಡುವೆ ತುಂಬಿವೆ. ಧೂಳು ಹಿಡಿದಿರುವ ಪ್ರತಿಮೆಗಳನ್ನು ಕಂಡರೆ ಬೇಸರವಾಗುತ್ತದೆ. ಸುಪ್ರೀಂಕೋರ್ಟ್ ಗಮನಕ್ಕೂ ಈ ವಿಚಾರ ಬಂದು ಪ್ರತಿಮೆಗಳನ್ನು ತೆರವುಗೊಳಿಸಲು ಆದೇಶಿಸಿದ್ದು, ಸಮಸ್ಯೆ ಉಲ್ಬಣವಾಗಲು ಸರ್ಕಾರದ ಅನಾಸಕ್ತಿಯೂ ಕಾರಣ.
Web Link: ಪ್ರತಿಮೆಗಳನ್ನು ಸ್ಥಾಪಿಸಿದರೆ ಸಾಕೆ?
(ವಿ.ಸೂ: ಚಿತ್ರವನ್ನು ಡೌನ್‌ಲೋಡ್ ಮಾಡಿಕೊಂಡು ಗ್ಯಾಲರಿಯಿಂದ ತೆರೆದರೆ ಲೇಖನವನ್ನು ಸ್ಪಷ್ಟವಾಗಿ ಓದಬಹುದು)